ಸಿದ್ದರಾಮಯ್ಯನವರು ಇಂದು ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡನೆ ಉದ್ಯೋಗ ಮತ್ತು ಶಿಕ್ಷಣ ವಲಯಕೆಷ್ಟು ಆದತ್ಯೆ .?

ಉದ್ಯೋಗಾಕಾಂಕ್ಷಿಗಳೊಂದಿಗೆ ಹಂಚಿಕೊಳ್ಳಿ..

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಾಡಿದಂತಿದೆ ಉದ್ಯೋಗ ಮತ್ತು ಶಿಕ್ಷಣ ವಲಯಕೆಷ್ಟು ಆದತ್ಯೆ ನಿಡಿದ್ದಾರೆಂದು ಗಮನಿಸುವದಾದರೆ-

 • ಐಐಟಿ, ಐಐಎಂ ಪ್ರವೇಶ ಪಡೆಯುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ 2 ಲಕ್ಷ ರೂ
 • ರಾಜ್ಯದ ವಿದ್ಯಾರ್ಥಿಗಳಿಗೆ 19.60 ಲಕ್ಷ ಉಚಿತ ಬಸ್‌ ಪಾಸ್‌ ಸೌಲಭ್ಯ
 • ಪದವಿ, ಪದವಿ ಪೂರ್ವ, ಸ್ನಾತಕೋತ್ತರ ಪದವಿಗೆ ಸೇರುವ ವಿದ್ಯಾರ್ಥಿನಿಯರಿಗೆ ಸಂಪೂರ್ಣ ಶುಲ್ಕ ವಿನಾಯಿತಿ
 • ಮಕ್ಕಳ ಸುರಕ್ಷತೆಗಾಗಿ ಸರಕಾರಿ ಪ್ರಾಥಮಿಕ ಮತ್ತ ಪ್ರೌಢಶಾಲೆಗಳಲ್ಲಿ ಹಂತ ಹಂತವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ.
 • ರಾಜ್ಯ ಕೇಂದ್ರ ಗ್ರಂಥಾಲಯಗಳ ಶತಮಾನೋತ್ಸವದ ಸ್ಮರಣಾರ್ಥ ಜಿಲ್ಲಾ, ನಗರ ಮತ್ತು ತಾಲ್ಲೂಕು ಸಾರ್ವಜನಿಕ ಗ್ರಂಥಾಲಯಗಳನ್ನು ಡಿಜಿಟಲ್ ಗ್ರಂಥಾಲಯಗಳನ್ನಾಗಿ ಮೇಲ್ದರ್ಜೆಗೆ, ಪ್ರಪ್ರಥಮ ಬಾರಿಗೆ ಅಂತರ್ಜಾಲದ ಕ್ಲೌಡ್ ಮೂಲಕ ಸರಕಾರಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ 10 ಲಕ್ಷ ವಿದ್ಯಾರ್ಥಿಗಳಿಗೆ ಡಿಜಿಟಲ್ ಗ್ರಂಥಾಲಯ ಸೌಲಭ್ಯ: 5 ಕೋಟಿ ರೂ ಅನುದಾನ
 • ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಪ್ರತಿ ತಾಲ್ಲೂಕಿನ ಒಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ (ಎಸ್‌.ಡಿ.ಎಂ.ಸಿ) ‘ಅತ್ಯುತ್ತಮ ಎಸ್.ಡಿ.ಎಂ.ಸಿ’ ಪ್ರಶಸ್ತಿ ಗೋಷಣೆ.
 • ಎಲ್ಲ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ಸಮಿತಿ ಪ್ರಾರಂಭ. ಅಗಸ್ತ್ಯ ಫೌಂಡೇಷನ್ ಸಹಭಾಗಿತ್ವದೊಂದಿಗೆ ಎಲ್ಲಾ ಜಿಲ್ಲೆಗಳಲ್ಲಿ ಸಂಚಾರಿ ವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆಗೆ 7.5 ಕೋಟಿ ರೂ ಅನುದಾನ.
 • ಮೈಸೂರು ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಕೇಂದ್ರ ಸ್ಥಾಪನೆಗೆ 2 ಕೋಟಿ ರೂ. ಅನುದಾನ.
 • ಚಿಕ್ಕಮಗಳೂರಿನಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ ಹಾಗೂ ಜಮಖಂಡಿಯಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ ಸ್ಥಾಪನೆಗೆ ತಲಾ ಒಂದು ಕೋಟಿ ರೂ. ಅನುದಾನ.
 • ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕೊಂಕಣಿ ಅಧ್ಯಯನ ಪೀಠ ಸ್ಥಾಪನೆಗೆ 1 ಕೋಟಿ ರೂ.
 • ಪೊಲೀಸ್ ಇಲಾಖೆಯಲ್ಲಿ ಶೇ.25ರಷ್ಟು ಮಹಿಳಾ ಮೀಸಲಾತಿ ಹೆಚ್ಚಳ
 • 25 ಹೊಸ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸ್ಥಾಪನೆ ,2018-19ನೇ ಸಾಲಿನಲ್ಲಿ ಗ್ರಾಮ ಪಂಚಾಯಿತ ಕೇಂದ್ರ ಸ್ಥಾನದಲ್ಲಿ 12ನೇ ತರಗತಿಯವರಿಗೆ 100 ‘ಕರ್ನಾಟಕ ಪಬ್ಲಿಕ್ ಶಾಲೆ’ ಸಂಯೋಜಿತ ಶಾಲೆಗಳು ಪ್ರಾರಂಭ. ಪ್ರತಿ ಶಾಲೆಗೆ 5 ಲಕ್ಷ ರೂ.ಗಳಂತೆ 5 ಕೋಟಿ ರೂ. ವೆಚ್ಚ. ಈ ಶಾಲೆಗಳಿಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಪ್ರಾರಂಭ.
 • ನೂರು ವರ್ಷ ಪೂರೈಸಿರುವ 100 ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ‘ಪಾರಂಪರಿಕ ಶಾಲೆ’ಗಳೆಂದು ಗುರುತಿಸಿ, ನವೀಕರಿಸಲು ಕ್ರಮ.

Source : vijaya karnataka

 

 

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.